ಪುಣೆಯ ರಿಯಲ್ ಎಸ್ಟೇಟ್ ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣಕ್ಕೆ ಈಗ ಹೊಸದೊಂದು ತಿರುವು ಸಿಕ್ಕಿದೆ. ಪ್ರಕರಣದ ಪ್ರಮುಖ ಆರೋಪಿ ಸಿಯಾ ಗೋಯಲ್ ಅವರ ಸಹೋದರ ಸಾಹಿಲ್ ಗೋಯಲ್‌ಗೆ ವಕೀಲ ಅಶುತೋಷ್ ಶ್ರೀವಾಸ್ತವ ಅವರು ಮಾನನಷ್ಟ ನೋಟಿಸ್ ಕಳುಹಿಸಿದ್ದಾರೆ. ಸಾಹಿಲ್ ತಮ್ಮ ವಿರುದ್ಧ ಸುಳ್ಳು ಮತ್ತು ಅವಹೇಳನಕಾರಿ ಆರೋಪಗಳನ್ನು ಮಾಡುವ ಮೂಲಕ ತಮ್ಮ ವೃತ್ತಿಪರ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿರುವ ಶ್ರೀವಾಸ್ತವ 10 ಕೋಟಿ ರೂ. ಪರಿಹಾರ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ.
